LATEST NEWS
ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ

ಮಂಗಳೂರು, ಮೇ 20: ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಹಲ್ಲೆ ಮಾಡಲಾಗಿತ್ತು. ಇದರ ಬೆನ್ನಲ್ಲೆ ಇಂದು ಕೂಡ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಡುಗೆ ಮಾಡುತ್ತಿದ್ದ ಕೈದಿಗೆ ಮತ್ತೋರ್ವ ಕೈದಿ ಹಲ್ಲೆ ಮಾಡಿದ್ದಾನೆ.
ಹಲ್ಲೆ ಮಾಡಿದ ಕೈದಿಯನ್ನು ಮುನೀರ್ ಎಂದು ಗುರುತಿಸಲಾಗಿದೆ. ಈ ವೇಳೆ ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು. ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಸ್ಥಳಕ್ಕೆ ತೆರಳಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
