Connect with us

    LATEST NEWS

    ದಸರಾ ಮುಗಿದ ತಕ್ಷಣವೇ 1 ರಿಂದ 5 ರವರೆಗಿನ ತರಗತಿ ಆರಂಭ – ಶಿಕ್ಷಣ ಸಚಿವ

    ಉಡುಪಿ ಅಕ್ಟೋಬರ್ 08: ದಸರಾ ಮುಗಿದ ತಕ್ಷಣವೇ 1 ರಿಂದ 5 ರವರೆಗಿನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ, ರಾಜ್ಯದ ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ ಜೀರೋ ಇದೆ ಈ ಹಿನ್ನಲೆ ಪ್ರಾಥಮಿಕ ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯ ಕೊಟ್ಟಿದ್ದು, ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭಿಸಲಾಗುವುದು ಎಂದರು.


    ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭಿಸಲು ಸಿಎಂ ಬೊಮ್ಮಾಯಿ ಕೂಡ ಆಸಕ್ತಿ ತೋರಿದ್ದಾರೆ. ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ” ಎಂದರು. ಇನ್ನು ದಸರಾ ಮುಗಿದ ತಕ್ಷಣ ಬಿಸಿಊಟ ಆರಂಭವಾಗಲಿದ್ದು, ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ ಶೀಘ್ರ ಶಾಲೆ ಆರಂಭಿಸುತ್ತೇವೆ. ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ಲೈನ್ ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದ್ದು, ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ” ಎಂದಿದ್ದಾರೆ.


    ಆನ್ಲೈನ್ ತರಗತಿಯಿಂದ ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆ ಆಗಿದ್ದು, ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ. 90ರಷ್ಟು ಇದೆ. ದಸರಾದ ಮರುದಿನದಿಂದಲೇ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟ ನೀಡಲಾಗುತ್ತದೆ” ಎಂದು ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply