Connect with us

DAKSHINA KANNADA

ಸುಬ್ರಹ್ಮಣ್ಯದಲ್ಲಿ ಮೇಘ ಸ್ಫೋಟ – ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧ

ಸುಬ್ರಹ್ಮಣ್ಯ ಅಗಸ್ಟ್ 1: ಇಂದು ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ಮೇಘ ಸ್ಪೋಟಕ್ಕೆ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ.

ಈ ಹಿನ್ನಲೆ ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೋರಿದ್ದಾರೆ. ನಾಗರಪಂಚಮಿ ಸಂದರ್ಭದಲ್ಲಿ ಉಂಟಾದ ಈ ಪರಿಸ್ಥಿತಿ ಭಕ್ತರಲ್ಲಿ ನಿರಾಶೆ ಮೂಡಿಸಿದೆ.


ಕುಕ್ಕೆ ದೇವಳದ ಸಮೀಪ ಇರುವ ದರ್ಪಣತೀರ್ಥ ನದಿಯ ಸ್ನಾನ ಘಟ್ಟವು ಮುಳುಗಡೆಯಾಗಿದೆ. ಸಮೀಪದ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಈ ಮಧ್ಯೆ ಸುಬ್ರಹ್ಮಣ್ಯ- ಪುತ್ತೂರು- ಮಂಜೇಶ್ವರ ಅಂತರರಾಜ್ಯ ಸಂಪರ್ಕ ರಸ್ತೆಯ ಸೇತುವೆಯು ಮುಳುಗಡೆಯಾಗುವ ಸಾಧ್ಯತೆ ಇದೆ. ದರ್ಪಣ ತೀರ್ಥ ನದಿಯ ತಟದಲ್ಲಿರುವ 12ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.

Advertisement
Click to comment

You must be logged in to post a comment Login

Leave a Reply