LATEST NEWS
ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು

ಮಂಗಳೂರು, ಮೇ 16 : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ಗೆ ವಹಿಸುವಂತೆ ಒತ್ತಾಯಿಸಿ ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಲು ಯತ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಿಂದ ಮಂಗಳೂರಿಗೆ ಬರುತ್ತಿದ್ದಾಗ ಯೆಯ್ಯಾಡಿ ಬಳಿ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಆದರೆ ಸಿಎಂ ಬೆಂಗಾವಲು ಪಡೆಯ ಕಾರು ಬರುವುದಕ್ಕೆ ಮುನ್ನವೇ ಕಪ್ಪು ಕೋಟಿನಲ್ಲಿದ್ದ ಸಿಸಿಬಿ ಪೊಲೀಸರು ತಡೆ ಹಾಕಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗುತ್ತಾ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಕಾರ್ಯಕರ್ತರನ್ನು ಬಳಿಕ ಪೊಲೀಸ್ ಬಸ್ಸಿನಲ್ಲಿ ವಶಕ್ಕೆ ಪಡೆದಿದ್ದಾರೆ.