DAKSHINA KANNADA
ಸಂಸದ ನಳಿನ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಮಂಗಳೂರು, ನವೆಂಬರ್ 19: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯ ಡಿ.ವಿ. ಸದಾನಂದ ಗೌಡ, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರೆ ಗಣ್ಯರಿದ್ದರು.
