Connect with us

    LATEST NEWS

    ಮಂಗಳೂರು ಗಲಭೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ – ಸಿಎಂ ಯಡಿಯೂರಪ್ಪ

    ಮಂಗಳೂರು ಗಲಭೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ – ಸಿಎಂ ಯಡಿಯೂರಪ್ಪ

    ಮಂಗಳೂರು ಡಿಸೆಂಬರ್ 22: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಗುರುವಾರ ನಡೆದ ಗಲಭೆಯಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ ರಾಜ್ಯ ಸರಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ಆದೇಶಿಸಿದೆ.

    ಬೆಂಗಳೂರಿನಲ್ಲಿ ಈ ಕುರಿತಂತೆ ಮಾಹಿತಿ ನೀಡಿರುವ ಸಿಎಂ ಯಡಿಯೂರಪ್ಪ ಮೃತಪಟ್ಟವರ ಕುಟುಂಬಿಕರಿಗೆ ತಕ್ಷಣ ಹಣ ಪರಿಹಾರದ ಹಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ ಆದೇಶ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿ ಗಲಭೆ ಎದ್ದಿತ್ತು. ನಂತರ ನಡೆದ ಗೋಲಿಬಾರ್ ನಲ್ಲಿ ಅಬ್ದುಲ್ ಜಲೀಲ್ ಹಾಗೂ ನೌಶೀನ್ ಮೃತಪಟ್ಟಿದ್ದರು.

    ನಿನ್ನೆ ಮುಖ್ಯಮಂತ್ರಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಗೊಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಸ್ಥರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ಗಲಭೆ ನಿಯಂತ್ರಣಕ್ಕೆ ಗೋಲಿಬಾರ್ ಅನಿವಾರ್ಯವಾಗಿತ್ತು ಎಂದು ಮುಖ್ಯಮಂತ್ರಿಗಳು ಶನಿವಾರ ಮಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದರು. ಅಲ್ಲದ ಗೊಲೀಬಾರ್ ಗೆ ಸಂಬಂಧಿಸಿದಂತೆ ಗೃಹ ಸಚಿವರ ಜೊತೆ ಚರ್ಚಿಸಿ ತನಿಖೆಗೆ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *