KARNATAKA
ರಾಜೀನಾಮೆ ಸುಳಿವು ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಬೆಂಗಳೂರು ಜುಲೈ 22:ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ.
ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಹಾಗೂ ಜೆಪಿ ನಡ್ಡಾ ನನ್ನ ಬಗ್ಗೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಜುಲೈ 26 ಕ್ಕೆ ನಾನು ಎರಡು ವರ್ಷ ಅಧಿಕಾರ
ಪೂರೈಸುತ್ತೇ ನೆ. ನಂತರ ಕೇಂದ್ರದ ನಾಯಕರು ನೀಡಿದ ಸೂಚನೆ ಪಾಲಿಸಲು ಸಿದ್ದ ಎಂದಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 25ರ ನಂತರ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದರು.