Connect with us

KARNATAKA

ಕೋವಿಡ್ ನಂತರ ಯುವಜನತೆ ಹಠಾತ್ ಸಾವಿನ ಬಗ್ಗೆ ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಫೆಬ್ರವರಿ 07: ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳಿಂದ ಹಿಡಿದೂ ಮದ್ಯ ವಯಸ್ಸಿನವರೆಗೂ ಹಠಾತ್ ಆಗಿ ಹೃದಯಾಘಾತ ಅಥವಾ ಇನ್ನಿತರ ಘಟನೆಗಳಿಂದ ಸಾವನಪ್ಪುತ್ತಿದ್ದಾರೆ. ಈ ಹಿನ್ನಲೆ ಇದೀಗ ಹಠಾತ್ ಸಾವುಗಳ ಬಗ್ಗೆ ಸಿಎಂಗೆ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಬರೆದ ಪತ್ರಕ್ಕೆ ಸ್ಪಂದಿಸಿ ಸಿದ್ದರಾಮಯ್ಯ ಸಂಶೋಧನೆ ನಡೆಸಿ ಮುಂದೆ ಈ ರೀತಿ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.


‘‘ಪತ್ರಕರ್ತ ರಾಜಾರಾಂ ತಲ್ಲೂರು, ಇವರು ಇ-ಮೇಲ್ ಮೂಲಕ ಇತ್ತೀಚೆಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದೆ. ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿರುತ್ತಾರೆ. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅತ್ಮಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿರುತ್ತಾರೆ’’ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮುಂದುವರಿದು, ‘‘ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ’’ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *