Connect with us

KARNATAKA

ರಾಜಕೀಯ ಒತ್ತಡ – ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನ

ಬೆಂಗಳೂರು, ನವೆಂಬರ್ 28 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಶುಕ್ರವಾರ ಸಂಜೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತೋಷ್ ಅವರನ್ನು ಕುಟುಂಬದವರು ಕಂಡು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪೊಲೀಸ್‌ ಮೂಲಗಳ ಪ್ರಕಾರ, ಅವರು ನಿದ್ರೆ ಮಾತ್ರೆಗಳನ್ನು ತೆಗೆದುಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಶುಕ್ರವಾರ ತಡರಾತ್ರಿ ಸಿಎಂ ಬಿಎಸ್‌ವೈ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಸಂತೋಷ್‌ ಅವರ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಮಾತನಾಡಿದ ಸಿಎಂ ಅವರು ಶುಕ್ರವಾರ ಬೆಳಿಗ್ಗೆ ಸಂತೋಷ್‌ ಅವರನ್ನು ಭೇಟಿ ಮಾಡಿದ್ದು, ಇಬ್ಬರೂ ಕೂಡಾ ವಾಯುವಿಹಾರ ಮಾಡಿದ್ದೆವು. ಆದರೆ, ಆತ್ಮಹತ್ಯೆ ಕಾರಣ ಏನು ಎಂದು ತಿಳಿದಿಲ್ಲ. ಅವರು ಕೂಡಲೇ ಚೇತರಿಸಿಕೊಳ್ಳಲಿ” ಎಂದಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ಸಂತೋಷ್ ಪತ್ನಿ ಜಾಹ್ನವಿ ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ ಎಂದು ತಿಳಿಸಿದ್ದಾರೆ.