KARNATAKA
ನೆಚ್ಚಿನ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಭೇಟಿಯಾದ ಸಿಎಂ ಸಿದ್ದರಾಮಯ್ಯ..!
ದೆಹಲಿ: ತನ್ನ ನೆಚ್ಚಿನ ಆಟಗಾರ ಹಾಗೂ ಕ್ರಿಕೆಟ್ ಲೋಕದ ದಂತಕತೆ ಸಚಿನ್ ತೆಂಡೂಲ್ಕರ್ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದಾರೆ.
ಆಕಸ್ಮಿಕವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜಾಗತಿಕ ಕ್ರಿಕೆಟ್ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ ಎಂದು ಹೇಳಿದ್ದಾರೆ.
ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಸಿದ್ದರಾಮಯ್ಯ ಅವರು ಕ್ರಿಕೆಟ್ ಪ್ರೇಮಿ ಎಂಬುದು ಎಲ್ಲರಿಗೂ ತಿಳಿದಿದೆ. ಅನೇಕ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಪಂದ್ಯಗಳನ್ನು ವೀಕ್ಷಣೆ ಮಾಡಿದ್ದಾರೆ.
https://x.com/siddaramaiah/status/1742910545156800607?s=20
You must be logged in to post a comment Login