KARNATAKA
ಹುಬ್ಬಳ್ಳಿ ಕರ ಸೇವಕ ಬಂಧನ, ಹಳೆ ಪ್ರಕರಣಗಳ ವಿಲೇವಾರಿ ಎಂದ ಸಿಎಂ ಸಿದ್ದರಾಮಯ್ಯ..!

ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
1992ರ ಡಿಸೆಂಬರ್ 6ರ ರಾಮ ಜನ್ಮಭೂಮಿ -ಬಾಬರಿ ಮಸೀದಿ ಧ್ವಂಸ ಘಟನೆಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಗೆ ಮರು ಜೀವ ಬಂದ ಮೇಲೆ ಆಡಳಿತ ಮತ್ತು ವಿಪಕ್ಷ ನಡುವೆ ಸಮರವೇ ಏರ್ಪಟ್ಟಿದೆ.

ಅಂದು ಹುಬ್ಬಳ್ಳಿಯ ಮಳಿಗೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣ ಈಗ ಮತ್ತೆ ಮೇಲೆದ್ದು ಬಂದಿದ್ದು, ಪ್ರಕರಣದ ಮೂರನೇ ಆರೋಪಿಯನ್ನು ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಲಾಗಿತ್ತು. 31 ವರ್ಷಗಳ ಬಳಿಕ ಅವರನ್ನು ಬಂಧಿಸಲು ಮುಂದಾಗಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್‌ನ ಸೇಡಿನ ರಾಜಕಾರಣ ಎಂಬ ಆಪಾದನೆ ಕೇಳಿಬಂದಿದೆ.ಈ ಬಗ್ಗೆ ಪ್ರತಿಕ್ರೀಯಿಸಿರುವ ಸಿಎಂ ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದಿದ್ದಾರೆ. ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದರು. ನ್ಯಾಯಾಲಯದ ಸೂಚನೆ ಇದ್ದರೆ, ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.