KARNATAKA
ಅಂಕೋಲಾದ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭಾನುವಾರ ಸಿಎಂ ಸಿದ್ದರಾಮಯ್ಯ ಭೇಟಿ..!
ಅಂಕೋಲಾ : ನಾಳೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕೋಲಾದ ಶಿರೂರಿಗೆ ಭೇಟಿ ನೀಡಿ ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದಾರೆ .
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದಿದ್ದಾರೆ.
ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.
ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775… pic.twitter.com/fWN7WAlCUw
— Siddaramaiah (@siddaramaiah) July 20, 2024
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭೇಟಿ
ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಮೀನುಗಾರಿಕಾ ಹಾಕೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭೇಟಿ ನೀಡಿ ಪರಿಹಾರ ಕಾರ್ಯದ ಬಗ್ಗೆ ಪರಾಮರ್ಶೆ ನಡೆಸಿದರು.
ಇದೇ ಸಂದರ್ಭ ಸೂರು ಕಳಕೊಂಡವಿಗೆ ಪರಿಹಾರ ಚೆಕ್ಕನ್ನು ಸ್ಥಳದಲ್ಲೇ ವಿತರಿಸಿದರು. ಈ ಸಂದರ್ಭ ಮಾತನಾಡಿದ ಸಚಿವರು ಮಣ್ಣಿನ ತೆರವು ಹಾಗೂ ಶೋಧ ಕಾರ್ಯ ವೇಗವಾಗಿ ನಡೆಯುತ್ತಿದೆ. ಮಳೆಯಿಂದ ಸ್ವಲ್ಪ ಕಾರ್ಯಾಚರಣೆ ಅಡ್ಡಿಯಾಗಿತ್ತು ಆದ್ರೆ ಇನ್ನೆರಡು ದಿನ ಬೇಕಾಗಬಹುದು. ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ತರಿಸಿ ನದಿಯಲ್ಲಿ ಶೋಧ ನಡೆಸುವ ಯೋಜನೆಯೂ ಇತ್ತು. ಆದ್ರೆ ಹವಾಮಾನ ವೈಪರೀತ್ಯದಿಂದ ಅದು ಸಾಧ್ಯವಿಲ್ಲ. ಇದೀಗ ಸುರತ್ಕಲ್ ನಿಂದ ರಡಾರ್ ತರಿಸಿ ಶೋಧ ನಡೆಸುತ್ತಿದ್ದೇವೆ. ಹೆದರುವ ಅವಶ್ಯಕತೆ ಇಲ್ಲ. ಕಾರ್ಯಾಚರಣೆ ವೇಗದಿಂದ ನಡೆಯುತ್ತಿದೆ. ನದಿಯಲ್ಲಿಯೂ ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮತ್ತು ಕೋಸ್ಟ್ ಗಾರ್ಡ್ ತಂಡ ಶೋಧ ನಡೆಸುತ್ತಿದೆ. ಮೊಬೈಲ್ ರಿಂಗ್ ಆದ ಬಗ್ಗೆಯೂ ಸುದ್ದಿ ಇದೆ. ಆದರೆ ಅದು ಸಾಧ್ಯವಿಲ್ಲ. ಮೀನುಗಾರರಿಗೆ ಇಲಾಖೆಯಿಂದ ಪರಿಹಾರ ನೀಡಲಾಗಿದೆ ಎಂದರು.