KARNATAKA
ಕಲಬುರಗಿ ಜಿಲ್ಲೆಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ, 1,685 ಕೋಟಿ ವೆಚ್ಚದಲ್ಲಿ ಕಲಬುರಗಿ ಸ್ಮಾರ್ಟ್ ಸಿಟಿ ಮಾಡಲು ಪಣ..!
ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಘೋಷಣೆ ಮಾಡಿದ್ದಾರೆ.
ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ತಂಗಿರುವ ಐತಿಹಾಸಿಕ ಐವಾನ್ ಇ ಶಾಹಿ ಅತಿಥಿಗೃಹದಿಂದ ಸಂಪುಟ ಸಭೆ ನಡೆಯಲಿರುವ ಮಿನಿ ವಿಧಾನಸೌಧ ಆವರಣದ ಪ್ರಾದೇಶಿಕ ಆಯುಕ್ತರ ಕಚೇರಿಗೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಬಂದರು. ಬೆಳಿಗ್ಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಖರೀದಿಸಲಾದ 50 ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದರು.
ಮಧ್ಯಾಹ್ನ ಆರಂಭವಾದ ಸಚಿವ ಸಂಪುಟ ಸಭೆಗೆ ಹೊಸ ಬಸ್‌ನಲ್ಲಿ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ. ಪಾಟೀಲ, ಡಾ.ಶರಣಪ್ರಕಾಶ್ ಪಾಟೀಲ, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್ ಇತರರು ಕೆಂಪು ಬಸ್ ನಲ್ಲಿಯೇ ಬಂದರು.
ಮುಖ್ಯಮಂತ್ರಿಗಳ ಕಲ್ಬುರ್ಗಿ ವಿಶೇಷ ಸಂಪುಟ ಸಭೆಯ ಪತ್ರಿಕಾಗೋಷ್ಠಿಯ ಹೈಲೈಟ್ಸ್
ಹೋರಾಟ, ತ್ಯಾಗ, ಬಲಿದಾನಗಳಿಂದ ಕಲ್ಯಾಣ ಕರ್ನಾಟಕ ವಿಮೋಚನೆಯಾದ ದಿನ ಇದು
ಕಲ್ಯಾಣ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಇಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದೇವೆ
*2013 ರಲ್ಲಿ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯ ಸಮಿತಿ ನೀಡಿದ ವರದಿಯನ್ನು ನಾವು ಯಥಾವತ್ತಾಗಿ ಒಪ್ಪಿಕೊಂಡೆವು. ಪರಿಣಾಮ 371J ಜಾರಿಯಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ಹಾಕಿಕೊಂಡು ಕೆಲಸಗಳು ಆರಂಭವಾದವು.
ಇಂದಿನ ಸಂಪುಟ ಸಭೆಯಲ್ಲಿ ಒಟ್ಟು 56 ವಿಷಯಗಳು ಚರ್ಚೆಯಾಗಿ ಒಪ್ಪಿಗೆ ಪಡೆಯಲಾಗಿದೆ. ಇದರಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಪಟ್ಟ ಸಂಗತಿಗಳನ್ನು ಒಪ್ಪಿಗೆ ಪಡೆಯಲಾಗಿದೆ.
ಒಟ್ಟು 56 ವಿಷಯಗಳಿಂದ 12692 ಕೋಟಿ ರೂಪಾಯಿ ವೆಚ್ಚವಾಗುತ್ತಿದ್ದು, ಇದರಲ್ಲಿ 46 ವಿಷಯಗಳ ಒಟ್ಟು ಮೊತ್ತ 11770 ಕೋಟಿ ಆಗಿದೆ.
ಇವುಗಳಲ್ಲಿ ಬಹಳ ಮುಖ್ಯವಾಗಿ ಬೀದರ್-ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಗಳನ್ನಾಗಿ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ.
ಬೀದರ್- ಗುಲ್ಬರ್ಗದ ಎಲ್ಲಾ ಜನ ವಸತಿ ಪ್ರದೇಶಕ್ಕೆ 7200 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನ ಮಾಡಿದ್ದೇವೆ*
7200 ಕೋಟಿಯಲ್ಲಿ ಶೇ50 ರಷ್ಟು ಮೊತ್ತವನ್ನು ಕೊಡುವಂತೆ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ
ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸಲು ತೀರ್ಮಾನ ಮಾಡಿದ್ದೇವೆ
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ತೀರ್ಮಾನ ಮಾಡಿದ್ದು ಇದರಿಂದ ಈ ಭಾಗದ ಅಭಿವೃದ್ಧಿಯ ವೇಗ ಹೆಚ್ಚಲಿದೆ
371J ಜಾರಿಯಾದ ಬಳಿಕ ಇಲ್ಲಿಯವರೆಗೂ ಕೇಂದ್ರ ಸರ್ಕಾರ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಹೀಗಾಗಿ ಒಂದು ನಿರ್ಣಯ ಪಾಸ್ ಮಾಡಿದ್ದೇವೆ. ಕೇಂದ್ರ ಸರ್ಕಾರ ಕೂಡ ರಾಜ್ಯ ಸರ್ಕಾರದ ಕೊಟ್ಟಿರುವುಷ್ಟೆ ಪ್ರಮಾಣದ 5000 ಕೋಟಿ ಕೊಡಬೇಕು ಎನ್ನುವ ನಿರ್ಣಯ ಮಾಡಿದ್ದೇವೆ
17439 ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನ
11770 ಕೋಟಿ ರೂಪಾಯಿಯಲ್ಲಿ , ಕೃಷಿ ಇಲಾಖೆಗೆ 100 ಕೋಟಿ, ಕೈಗಾರಿಕಾ ಇಲಾಖೆಗೆ 1550 ಕೋಟಿ , ಅರಣ್ಯ 32, ಆರೋಗ್ಯ 910 ಕೋಟಿ ಸೇರಿ ನಾನಾ ಇಲಾಖೆಗಳಿಗೆ ಹಣ ಹಂಚಿಕೆ ಮಾಡಲಾಗಿದೆ.
ಮಿನಿ ವಿಧಾನಸೌಧಗಳಿಗೆ ಪ್ರಜಾಸೌಧ ಎಂದು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ
*ನಂಜುಂಡಪ್ಪನವರ ಅಧ್ಯಕ್ಷತೆಯ ಸಮಿತಿ ವರದಿಯಲ್ಲಿನ ಹಿಂದುಳಿದ 119 ತಾಲ್ಲೂಕುಗಳಲ್ಲಿ ಇದುವರೆಗೂ ಏನೆಲ್ಲಾ ಪ್ರಗತಿ ಆಗಿದೆ ಎನ್ನುವುದನ್ನು ಅರಿಯಲು ಆರ್ಥಿಕ ತಜ್ಞ ಗೋವಂದರಾವ್ ಅಧ್ಯಕ್ಷತೆಯ ಸಮಿತಿ ಮಾಡಿದ್ದೇವೆ. 6 ತಿಂಗಳಲ್ಲಿ ಸಮಿತಿ ವರದಿ ನೀಡುತ್ತದೆ. ಬಳಿಕ ನಮಗೆ
ಕಲ್ಯಾಣ ಕರ್ನಾಟಕದಲ್ಲಿ ಹೊಸದಾಗಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ನಿರ್ಣಯ, 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾಡಲು ತೀರ್ಮಾನ ಮಾಡಿದ್ದೇವೆ. 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಇದರಲ್ಲಿ ಎರಡನ್ನು ಜಿಲ್ಲಾ ಆಸ್ಪತ್ರೆಗಳನ್ನಗಿ ಮೇಲ್ದರ್ಜೆಗೆ ಏರಿಸಲಾಗುವುದು. ಇದಕ್ಕೆ 892 ಕೋಟಿ ವೆಚ್ಚ ಮಾಡುತ್ತಿದ್ದೇವೆ