LATEST NEWS
ಅ.22 ರಂದು ಸಿ.ಎಂ ಬಂಟ್ವಾಳಕ್ಕೆ. 252.5 ಕೋ.ವೆಚ್ಚದ ಕಾಮಗಾರಿಗಳ ಉದ್ಘಾಟನೆ
ಅ.22 ರಂದು ಸಿ.ಎಂ ಬಂಟ್ವಾಳಕ್ಕೆ. 252.5 ಕೋ.ವೆಚ್ಚದ ಕಾಮಗಾರಿಗಳ ಉದ್ಘಾಟನೆ
ಮಂಗಳೂರು, ಅಕ್ಟೋಬರ್ 19 : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 22 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ ಆಗಮಿಸುವ ಮುಖ್ಯಮಂತ್ರಿಗಳು ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 252 ಕೋಟಿ ರೂಪಾಯಿಗಳ ಅಭಿವೃದ್ದಿ ಕಾಮಾಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಅವರು ತಿಳಿಸಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ ಸಚಿವರು.ಆ ದಿನ ಮುಖ್ಯಂತ್ರಿಗಳು ಬೆಳಗ್ಗೆ ಹತ್ತು ಗಂಟೆಗೆ ಆಗಮಿಸಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 252 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ದಿ ಯೋಜನೆಗಳ ಉದ್ಟಾಟನೆ ಮತ್ತು ಶಿಲನ್ಯಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇದರಲ್ಲಿ ಪ್ರಮುಖವಾಗಿ ಮಿನಿ ವಿಧಾನ ಸೌಧ, ಕೆ ಎಸ್ ಅರ್ ಟಿ ಸಿ ಬಸ್ ನಿಲ್ದಾಣ, ಮೆಸ್ಕಂ ಕಚೇರಿ, ಸಮಗ್ರ ಕುಡಿಯುವ ನೀರಿನ ಯೋಜನೆ , ಅರ್ ಟಿ, ಓ ಕಚೇರಿ ಹೀಗೆ ಹತ್ತು ಹಲವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಮುಖ್ಯಮಂತ್ರಿ ಜೊತೆ ಆಯಾಯ ಇಲಾಖೆ ಸಂಬಂಧಿಸಿದ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಕುಮಾರ್, ಎಸ್ಪಿ ಸುಧೀರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ರವಿ ಕುಮಾರ್, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ,ಹೆಚ್ ಖಾದರ್ ಅವರು ಸುದ್ದಿಗೋಷ್ಟಿಯಲಿ ಉಪಸ್ಥಿತರಿದ್ದರು.
You must be logged in to post a comment Login