LATEST NEWS
ಹಿಂಸೆಗೆ ಇಳಿದರೆ ಸರಕಾರ ಸಹಿಸುವುದಿಲ್ಲ – ಸಿಎಂ ವಾರ್ನಿಂಗ್

ಉಡುಪಿ ಎಪ್ರಿಲ್ 11: ಅವರವರ ವಿಚಾರ ಪ್ರಚಾರಮಾಡಲು ಏನೂ ತೊಂದರೆ ಇಲ್ಲ . ಆದರೆ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಹಿಂಸೆಗೆ ಇಳಿದರ ಸರಕಾರ ಸಹಿಸುವುದಿಲ್ಲ ಈ ಬಗ್ಗೆ ಈಗಾಗಲೇ ಸ್ಪಷ್ಟ ಸಂದೇಶ ಕಳುಹಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಸಂವಿಧಾನ ಬದ್ಧವಾಗಿ ರಚನೆಯಾಗಿರುವ ಸರ್ಕಾರಕ್ಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಗೊತ್ತಿದೆ. ಎಲ್ಲರೂ ಸಮಾನರು ಎಂಬ ದೃಷ್ಟಿಯಿಂದ ಸರ್ಕಾರ ಕೆಲಸ ಮಾಡುತ್ತಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳ ಪಾಠದ ಅಗತ್ಯ ಇಲ್ಲ ಎಂದರು.

ಹಿಂದೆ ನಡೆದ ಹಲವು ಯುವಕರ ಕೊಲೆ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿದ್ದ ಸಂಘಟನೆಗಳ ಹಾಗೂ ಮುಖಂಡರ ಮೇಲಿದ್ದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿತ್ತು. ಈಗ ಬಿಜೆಪಿಗೆ ಪಾಠ ಹೇಳಲು ಬರುತ್ತಿರುವ ಕಾಂಗ್ರೆಸ್‌ನಿಂದ ಕಲಿಯಬೇಕಾಗಿರುವುದು ಏನೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಸರ್ಕಾರ ಯಾವ ಸಂದರ್ಭದಲ್ಲಿ, ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೋ ತೆಗೆದುಕೊಳ್ಳಲಿದೆ. ಪ್ರಗತಿಪರವಾದ ರಾಜ್ಯವನ್ನು ಕಾಪಾಡಿಕೊಳ್ಳುವುದು ಗೊತ್ತಿದೆ ಎಂದು ಬೊಮ್ಮಾಯಿ ತಿರುಗೇಟು ನೀಡಿದರು