Connect with us

    LATEST NEWS

    ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

    ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

    ಮಂಗಳೂರು ಜುಲೈ 28: ಹಿರಿಯ ಖ್ಯಾತ ಸಾಹಿತಿ ಏರ್ಯ ಲಕ್ಷ್ಮೀನಾರಾಯಾಣ ಆಳ್ವ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಖ್ಯಾತ ಸಾಹಿತಿ ಶ್ರೀ ಏರ್ಯ ನಾರಾಯಣ ಆಳ್ವ ಅವರ ನಿಧನ ಸುದ್ಧಿ ತಿಳಿದು ತುಂಬಾ ದುಃಖವಾಗಿದೆ. ಸಾಹಿತ್ಯ ಕ್ಷೇತ್ರ ಹಾಗೂ ಹಿಂದೂ ಧಾರ್ಮಿಕ ಶ್ರದ್ಧಾಬಿಂದುಗಳನ್ನು ರಕ್ಷಿಸಿ ಪೋಷಿಸುವ ಕಾರ್ಯಗಳಿಗೆ ಅವರು ನೀಡಿದ್ದ ಕೊಡುಗೆ ಅಪಾರ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಎಂದು ಟ್ವೀಟ್ ಮಾಡಿದ್ದಾರೆ.

    ನಿನ್ನೆ ಹಿರಿಯ ಸಾಹಿತಿ ಏರ್ಯಲಕ್ಷೀನಾರಾಯಣ ಆಳ್ವ(94)ಅವರು ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನ ಹೊಂದಿದ್ದರು. ಅಂಕಣಕಾರರಾಗಿ, ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ,ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯಾಗಿದ್ದ ಏರ್ಯ ಅವರು ಸಾಹಿತ್ಯ ದಲ್ಲಿ ವಿಶೇಷ ಸಾಧನೆಗೈದಿದ್ದರು.

    ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ನಿಕಟವರ್ತಿ ಯಾಗಿದ್ದ ಏರ್ಯ ಅವರು ಅಲ್ಲಿನ ಎಲ್ಲಾ ಕಾರ್ಯಕ್ರಮ ಗಳಲ್ಲಿ ಇವರು ಭಾಗಿಯಾಗುತ್ತಿದ್ದರು. ಅಲ್ಲದೆ ಬಂಟ್ವಾಳ ದಲ್ಲಿ ಏರ್ಯಲಕ್ಮೀನಾರಾಯಣ ಅಳ್ವ ಅವರ ನೇತ್ರತ್ವದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಗಳಲ್ಲಿ ಹೆಗ್ಗಡೆ ಯವರು ಪಾಲ್ಗೊಳ್ಳುತ್ತಿದ್ದರು.

    ಏರ್ಯ ಅವರು ಪತ್ನಿ ಹಾಗೂ ಮಗಳು ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಏರ್ಯ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply