Connect with us

    LATEST NEWS

    ಜೂನ್ 4 ರಂದು ಕೋಸ್ಟಲ್ ಫಿಲ್ಮ್ ಅವಾರ್ಡ್ ಕಾರ್ಯಕ್ರಮ

    ಮಂಗಳೂರು ಮೇ 24: ತುಳು ಸಿನೆಮಾ ರಂಗದ ಕೋಸ್ಟಲ್ ಫಿಲ್ಮ್ ಅವಾರ್ಡ್ ಪ್ರಧಾನ ಸಮಾರಂಭ ಜೂನ್ 4 ರಂದು ಮೂಲ್ಕಿ ಸುಂದರ್‌ರಾಮ್‌ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.


    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾರ್ಯಕ್ರಮ ಆಯೋಜಕ ಸಂದೇಶ್‌ ರಾಜ್‌ ಬಂಗೇರ, ‘ಒಟ್ಟು 28 ವರ್ಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. 2020ರ ಜನವರಿಯಿಂದ 2022ರ ಡಿಸೆಂಬರ್‌ವರೆಗೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡ ಚಿತ್ರಗಳನ್ನು ಪ್ರಶಸ್ತಿಗೆ ಪರಿಗಣಿಸಲಿದ್ದೇವೆ. ಒಟಿಟಿಗಳಲ್ಲಿ ಮಾತ್ರ ಬಿಡುಗಡೆಯಾದ ಚಿತ್ರಗಳನ್ನು ಪರಿಗಣಿಸುವುದಿಲ್ಲ. ಜೀವಮಾನ ಸಾಧನೆ ಪ್ರಶಸ್ತಿ, ತೀರ್ಪುಗಾರರ ವಿಶೇಷ ಪ್ರಶಸ್ತಿ ಹಾಗೂ ವರ್ಸಟೈಲ್‌ ಆ್ಯಕ್ಟರ್‌ ಪ್ರಶಸ್ತಿಯನ್ನೂ ಪ್ರದಾನ ಮಾಡಲಿದ್ದೇವೆ’ ಎಂದು ತಿಳಿಸಿದರು.

    ‘ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಾಲಿವುಡ್‌ ಹಾಗೂ ಸ್ಯಾಂಡಲ್‌ವುಡ್‌ನ ತಾರೆಯರು, ತುಳು ಸಿನಿಮಾ ರಂಗದ ಪ್ರಮುಖ ಕಲಾವಿದರು ಭಾಗವಹಿಸಲಿದ್ದಾರೆ. ತಾರೆಯರೇ ನಡೆಸಿಕೊಡುವ 10 ನೃತ್ಯ ಕಾರ್ಯಕ್ರಮಗಳು ಹಾಗೂ ಪ್ರಕಾಶ್‌ ಮಹಾದೇವನ್‌ ತಂಡವು ನಡೆಸಿಕೊಡುವ ರಸಮಂಜರಿ ಈ ಕಾರ್ಯಕ್ರಮದ ವಿಶೇಷ ಆಕರ್ಷಣೆ’ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply