LATEST NEWS
ಬೇರೆ ಬ್ಯಾಂಕ್ ಗಳೊಂದಿಗೆ ವಿಲೀನಗೊಳ್ಳಲಿದೆ ಕರಾವಳಿಯ ಬಹುತೇಕ ರಾಷ್ಟ್ರೀಕೃತ ಬ್ಯಾಂಕ್ ಗಳು
ಬೇರೆ ಬ್ಯಾಂಕ್ ಗಳೊಂದಿಗೆ ವಿಲೀನಗೊಳ್ಳಲಿದೆ ಕರಾವಳಿಯ ಬಹುತೇಕ ರಾಷ್ಟ್ರೀಕೃತ ಬ್ಯಾಂಕ್ ಗಳು
ನವದೆಹಲಿ ಅಗಸ್ಟ್ 30: ಕರಾವಳಿಯಲ್ಲಿ ಹುಟ್ಟಿದ್ದ ಬಹುತೇಕ ರಾಷ್ಟ್ರೀಕೃತ ಬ್ಯಾಂಕ್ ಗಳು ಬೇರೆ ಬ್ಯಾಂಕ್ ಗಳೊಂದಿಗೆ ವಿಲೀನಗೊಳ್ಳಲಿದೆ. ಆರ್ಥಿಕ ಸುಧಾರಣೆ ಮತ್ತು ಬ್ಯಾಂಕಿಂಗ್ ಕ್ಷೇತ್ರವನ್ನು ಬಲಪಡಿಸುವ ಕ್ರಮವಾಗಿ ಕೆಲವು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ವಿಲೀನ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾಗತಿಕ ಆರ್ಥಿಕ ಹಿಂಜರಿತದ ಹಿನ್ನಲೆಯಲ್ಲಿ ಭಾರತದ ಆರ್ಥಿಕತೆಯನ್ನು ಬಲಪಡಿಸಲು ಹಲವಾರು ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ಬ್ಯಾಂಕ್‌ಗಳನ್ನು ವಿಲೀನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನವಾಗಲಿದೆ. ಅದೇ ರೀತಿ ಕೆನರಾ ಬ್ಯಾಂಕ್‌ನಲ್ಲಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ ವಿಲೀನವಾದರೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ವಿಲೀನವಾಗಲಿದೆ.
1906ರಲ್ಲಿ ಮಂಗಳೂರಿನಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಕೆನರಾ ಬ್ಯಾಂಕ್ ಆರಂಭಿಸಿದ್ದರೆ, ಸಿಂಡಿಕೇಟ್ ಬ್ಯಾಂಕ್ ಅನ್ನು ಉಪೇಂದ್ರ ಅನಂತ್ ಪೈ, ಟಿಎಂಎ ಪೈ, ವಾಮನ ಕುಡುವ 1924 ರಲ್ಲಿ ಮಣಿಪಾಲದಲ್ಲಿ ಆರಂಭಿಸಿದ್ದರು. ಕಾರ್ಪೋರೇಷನ್ ಬ್ಯಾಂಕ್ ಅನ್ನು 1906 ರಲ್ಲಿ ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಮಂಗಳೂರಿನಲ್ಲಿ ಸ್ಥಾಪಿಸಿದ್ದರು. ಈ ಹಿಂದೆ ಮಂಗಳೂರು ಮೂಲದ ವಿಜಯ್ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾದ ಜೊತೆ ವಿಲೀನಗೊಂಡಿತ್ತು.