Connect with us

    DAKSHINA KANNADA

    ಕರಾವಳಿಯಲ್ಲಿ ಶನಿವಾರ ರೆಡ್ ಅಲರ್ಟ್ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ( puc) ಜು.20 ರಂದು ರಜೆ ಘೋಷಣೆ..!

    ಮಂಗಳೂರು/ ಉಡುಪಿ, ಜು.19: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜು.20ರಂದು ಕರಾವಳಿಯ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

    ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜು.20ರಂದು ಶನಿವಾರ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply