DAKSHINA KANNADA
ಅಧಿಕಾರಿಗಳ ಸಭೆ ಕರೆದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಪ್ರಕರಣ ದಾಖಲು
ಪುತ್ತೂರು ಮೇ 13: ಲೋಕಸಭೆ ಮತ್ತು ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘಿಸಿದ್ದು. ಇದೀಗ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಛೇರಿಯಲ್ಲಿ ನೀರು ಪೂರೈಕೆ ಅಧಿಕಾರಿಗಳ ಸಭೆ ಕರೆದಿದ್ದರು. ಈ ಸಭೆಗೆ ಚುನಾವಣಾ ಅಧಿಕಾರಿಗಳು ಆಗಮಿಸಿದ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಸೂಚನೆ ನೀಡಿದರು.
ಆದರೆ ಶಾಸಕರು ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಅಧಿಕಾರಿಗಳಿಗೆ ತಿಳಿಸಿದರು. ಈ ವೇಳಎ ಚುನಾವಣಾಧಿಕಾರಿಗಳು ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ನೀವು ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಮನವಿ ಮಾಡಿದರು. ಕಛೇರಿಯಿಂದ ಶಾಸಕರನ್ನು ಮತ್ತು ಕಛೇರಿ ಸಿಬ್ಬಂದಿಗಳನ್ನು ಹೊರ ಅಧಿಕಾರಿಗಳು ಹೊರಗೆ ಕಳುಹಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡದಿಂದ ಶಾಸಕರಿಗೆ ಸೂಚನೆ ನೀಡಿದ್ದು, ಇದೀಗ ಶಾಸಕ ಅಶೋಕ್ ಕುಮಾರ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.