LATEST NEWS
ಹರ್ಯಾಣದ ಚುನಾವಣಾ ಕುಸ್ತಿಯಲ್ಲಿ ಕಮಲದ ವಿರುದ್ದ ಗೆದ್ದು ಬೀಗಿದ ವಿನೇಶ್ ಫೋಗಟ್..!
ಹರ್ಯಾಣ : ಹರ್ಯಾಣ ಚುನಾವಣೆಯ ಕುಸ್ತಿಯಲ್ಲಿ (Haryana Election ) ಜುಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ (Vinesh Phogat) 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಯೋಗೀಶ್ ಬೈರಾಗಿ ಮತ್ತು ಕಾಂಗ್ರೆಸ್ ನ ವಿನೇಶ್ ಫೋಗಟ್ ಮಧ್ಯೆ ನೇರಾನೇರಾ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್ ಫೋಗಟ್ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ. ಹರ್ಯಾಣ ಚುನಾವಣೆಯಲ್ಲಿ ಕಿಸಾನ್, ಜವಾನ್, ಪೈಲ್ವಾನ್ ಘೋಷ ವಾಕ್ಯವನ್ನು ಇಟ್ಟುಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸಿತ್ತು.
ವಿಧಾನಸಭಾ ಚುನಾವಣೆಯಲ್ಲಿ ವಿನೇಶ್ ಅವರ ಎದುರಾಳಿ, ಯೋಗೇಶ್ ಬೈರಾಗಿ ಒಂಬತ್ತು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದರು. ಹರಿಯಾಣ ಬಿಜೆಪಿ ಯುವ ಘಟಕದ ಅಧ್ಯಕ್ಷರಾಗಿದ್ದಾರೆ. ಕುಸ್ತಿಪಟು ವಿನೇಶ್ ಫೋಗಟ್ ಅವರು 2024 ರ ಒಲಿಂಪಿಕ್ಸ್‌ನಲ್ಲಿ 150 ಗ್ರಾಂ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50-ಕಿಲೋಗ್ರಾಂ ಫ್ರೀಸ್ಟೈಲ್ ಕುಸ್ತಿ ವಿಭಾಗದಿಂದ ಅನರ್ಹರಾಗಿದ್ದರು. ಇದು ಅವರಿಗೆ ಕಹಿ ಆಘಾತವನ್ನುಂಟು ಮಾಡಿತ್ತು, ಒಲಿಂಪಿಕ್ಸ್ ಪದಕ ಗೆಲ್ಲುವ ಕನಸನ್ನು ನುಚ್ಚುನೂರು ಮಾಡಿತ್ತು. ನಂತರ ವಿನೇಶ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರು.
You must be logged in to post a comment Login