LATEST NEWS
ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಭಾರತೀಯ ಸೇನೆಯ ಇಬ್ಬರು ಮಹಿಳಾ ಸೇನಾಧಿಕಾರಿಗಳು

ನವದೆಹಲಿ ಮೇ 07: ಕಾಶ್ಮೀರದ ಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ 9 ಅಡಗುತಾಣಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ.
ಈ ಕುರಿತು ಬುಧವಾರ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ, ಕರ್ನಲ್ ಸೋಫಿಯಾ ಖುರೇಶಿ ಮತ್ತು ವಿಂಗ್ ಕಮಾಂಡರ್ ವ್ಯುಮಿಕ ಸಿಂಗ್ ಅವರು ಜಂಟಿ ಸುದ್ದಿಗೋಷ್ಟಿ ನಡೆಸಿದರು. ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಮಿಲಿಟರಿ ಆಪರೇಷನ್ ಸಿಂಧೂರ ಹೆಸರಿನಲ್ಲಿ 9 ಉಗ್ರರ ತಾಣ ಮತ್ತು ತರಬೇತಿ ಸೌಲಭ್ಯ ಶಿಬಿರದ ಮೇಲೆ ದಾಳಿ ನಡೆಸಿದೆ. ಗಡಿಯಾಚೆಗಿನ ಭಯೋತ್ಪಾದನೆಯ ನೇರ ಸಂಪರ್ಕದ ಸಂಬಂಧ ಕುರಿತು ನಿಖರ ಗುಪ್ತಚರ ಮಾಹಿತಿ ಆಧಾರದ ಮೇಲೆ ಎಚ್ಚರಿಕೆಯಿಂದ ಈ ದಾಳಿ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಮರ್ಕಜ್ ಸುಭಾನಲ್ಲಾ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯನ್ನು ನಾಶ ಮಾಡಲಾಗಿದೆ. ಇಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿತ್ತು. ಯಾವುದೇ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡಿಲ್ಲ. ಯಾವುದೇ ನಾಗರಿಕರಿಗೂ ಹಾನಿಯಾಗಿಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಾಗಿದೆ.