BELTHANGADI
ಬೆಳ್ತಂಗಡಿ: ನಿಗೂಢ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿ ವಿಷ ಸೇವನೆ ಮಾಡಿ ಜೀವಾಂತ್ಯ..!!
ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಜೀವಾಂತ್ಯ ಮಾಡಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಜೀವಾಂತ್ಯ ಮಾಡಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.
ಸ್ಥಳಿಯ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ 17ವರ್ಷ ಪ್ರಾಯದ ಋಶ್ವಿ ಜೀವಾಂತ್ಯಗೊಳಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ಋಶ್ವಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವನೆ ಮಾಡಿದ್ದ್ದುದಳು . ಕೂಡಲೇ ಅವಳನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋತ್ವಿ ಅವರು ಇಹಲೋಕ ತ್ಯಜಿಸಿದ್ದಾಳೆ. ಋಶ್ವಿ ಜೀವಾಂತ್ಯಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Continue Reading
2 Comments