LATEST NEWS
ಕಾರ್ಕಳ – ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ
ಕಾರ್ಕಳ ಸೆಪ್ಟೆಂಬರ್ 20: ಕಾಲೇಜು ಉಪನ್ಯಾಸಕಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಪೆರ್ವಾಜೆಯಲ್ಲಿ ಎಂಬಲ್ಲಿ ಸಂಭವಿಸಿದೆ. ಮೃತರನ್ನು ತೆಳ್ಳಾರಿ ಮೂಲದ ಆರ್.ಮಮತಾ ಶೆಟ್ಟಿ(42) ಎಂದು ಗುರುತಿಸಲಾಗಿದ್ದು, ಇವರು ಶ್ರೀವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ವಿಧ್ಯಾರ್ಥಿ ಜೀವನದಲ್ಲಿ ಎಸ್ಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಇವರು ಮದುವೆಯಾದ ಬಳಿಕ ಪೆರ್ವಾಜೆಯಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ಮನೆಯ ಫ್ಯಾನ್ಗೆ ನೇಣು ಬಿಗಿದುಕೊಂಡು ಬದುಕಿಗೆ ಅಂತ್ಯ ಹೇಳಿದ್ದಾರೆ. ಮಧುಮೇಹ ಹಾಗೂ ಮಾನಸಿಕ ಖಿನ್ನತೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗುರುತಿಸಿಕೊಂಡಿದ್ದರು. ವಿದ್ಯಾರ್ಥಿ ಚಳವಳಿಗಳಲ್ಲೂ ಸಕ್ರಿಯರಾಗಿದ್ದರು.