LATEST NEWS
ಕಾರ್ಕಳ – ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತ್ರಿಕೋಧ್ಯಮದ ವಿಧ್ಯಾರ್ಥಿ

ಕಾರ್ಕಳ ಅಕ್ಟೋಬರ್ 12:ಮಾನಸಿಕ ಖಿನ್ನತೆಗೆ ಒಳಗಾದ ವಿಧ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿ ಶಿರ್ಲಾಲು ಎಂಬಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿಯನ್ನು ಶಬರೀಶ್ (20) ಎಂದು ಗುರುತಿಸಲಾಗಿದ್ದು, ಈತ ಕಾರ್ಕಳದ ಎಂಪಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ. ಕೆಲದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದ್ದು,ಇಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
