BANTWAL
ಕಾರಿಂಜ – ತಿರುಗಾಡಲು ಬಂದಿದ್ದ ಅನ್ಯಕೋಮಿನ ಯುವಕ ಯುವತಿಯರನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

ಬಂಟ್ವಾಳ: ಕಾರಿಂಜ ದೇವಸ್ಥಾನ ಸಮೀಪ ತಿರುಗಾಡಲು ಆಗಮಿಸಿದ್ದ ಅನ್ಯಕೋಮಿನ ಯುವಕ ಯುವತಿಯರನ್ನು ಹಿಂದೂ ಸಂಘಟನೆ ಸದಸ್ಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಇವರೆಲ್ಲರೂ ಮಂಗಳೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಮೂವರು ಯುವಕರು ಮತ್ತು ಮೂವರು ಯುವತಿಯರು ಪ್ರಕೃತಿ ವೀಕ್ಷಣೆಗೆ ಬಂದಿದ್ದರು ಎಂದು ಹೇಳಲಾಗಿದೆ. ಯುವಕರು ಕೇರಳ ಮೂಲದವರು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ವಿಧ್ಯಾರ್ಥಿಗಳನ್ನು ಪೂಂಜಾಲುಕಟ್ಟೆ ಪೋಲೀಸರು ವಿಚಾರಣೆ ನಡೆಸಿದ್ದಾರೆ.
