BELTHANGADI
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ ಸಾವು

ಬೆಳ್ತಂಗಡಿ ಮಾರ್ಚ್ 24: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿ 20 ವರ್ಷ ವಯಸ್ಸಿನ ವಿನ್ಸಿ ಎಂದು ಗುರುತಿಸಲಾಗಿದೆ. ಈಕೆ ಮಾರ್ಚ್ 14 ರಂದು ಯಾವುದೋ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಹೇಳಲಾಗಿದೆ.
ತಕ್ಷಣ ಅವಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಮಾರು 10 ದಿನಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
