ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ಮುಖಾಮುಖಿ ಡಿಕ್ಕಿ 7 ಮಂದಿ ಗಂಭೀರ ಗಾಯ

ಮಂಗಳೂರು ಡಿಸೆಂಬರ್ 1:ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಎಂಬಲ್ಲಿ ನಡೆದಿದೆ.

ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಇಚಿಲಂಪಾಡಿಯ ಎರಡನೇ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಒಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ.