Connect with us

  LATEST NEWS

  ಉಡುಪಿ – ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ ಕಡ್ಡಾಯ

  ಉಡುಪಿ, ಫೆಬ್ರವರಿ 02 : ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ.


  ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ ಮಾಡುತ್ತಿರುವುದಾಗಿ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬಂದಿದ್ದು, ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳನ್ನು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಲು ತೊಂದರೆ ನೀಡಬಾರದು ಮತ್ತು ಈಗಾಗಲೇ ಜಾರಿಯಲ್ಲಿರುವಂತೆ ಎಲ್ಲಾ ಆಟೋರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಸಂಚರಿಸಲು ಎಲ್ಲಾ ಆಟೋರಿಕ್ಷಾ ಚಾಲಕರು ಕ್ರಮವಹಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

  Share Information
  Advertisement
  Click to comment

  You must be logged in to post a comment Login

  Leave a Reply