Connect with us

    DAKSHINA KANNADA

    ‘ಕೂಡಲೇ ನಿರ್ಧಾರಕ್ಕೆ ಬನ್ನಿ ಇಲ್ಲವಾದ್ರೆ ಪುತ್ತೂರಿನಲ್ಲಿ ನಡೆದ ವಿದ್ಯಾಮಾನಗಳು ಇಡೀ ರಾಜ್ಯದಲ್ಲಿ ನಡೆಯಲಿದೆ’; ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ..!

    ಸೂಕ್ತ ನಿರ್ಧಾರ ಮೂರು ದಿನಗಳೊಳಗೆ ಕೈಗೊಳ್ಳಬೇಕು ಇಲ್ಲವಾದಲ್ಲಿ ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧವಾಗಿದೆ. ಇಲ್ಲವಾದಲ್ಲಿ ಪುತ್ತೂರಿನಲ್ಲಿ ನಡೆದ ವಿದ್ಯಾಮಾನಗಳು ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಬಿಜೆಪಿ ನಾಯಕರನ್ನು ಎಚ್ಚರಿಸಿದ್ದಾರೆ.

    ಪುತ್ತೂರು : ಪುತ್ತಿಲ ಪರಿವಾರದ ಬಿಜೆಪಿ ಸೇರ್ಪಡೆ ಕುರಿತ ಮಹತ್ವದ ಸಮಾಲೋಚನಾ ಸಭೆ ಪುತ್ತೂರಿನಲ್ಲಿ ಸಭೆ ಪುತ್ತೂರಿನಲ್ಲಿ ಸೋಮವಾರ ನಡೆಯಿತು. ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಒಟ್ಟು ಸೇರಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ಪುತ್ತಿಲ ಪರಿವಾರದ ಮುಖಂಡರ ಪ್ರಮುಖ ಬೇಡಿಕೆಯಾಗಿದ್ದು ಮೂರು ದಿನಗಳ ಡೆಡ್ ಲೈನ್ ಬಿಜೆಪಿಗೆ ನೀಡಲಾಗಿದೆ.

    ಸಭೆ ನಿರ್ಣಯ ಮಂಡಿಸಿದ ಬಳಿಕ ಮಾಧ್ಯಮಕ್ಕೆ ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದು ಸಭೆಯ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ದ.ಕ. ಜಿಲ್ಲೆಯಲ್ಲಿ ಸುಮಾರು 718 ವಾಟ್ಸಾಪ್ ಗ್ರೂಪ್ ಗಳಲ್ಲಿ 4,23,400 ಜನ ಬೆಂಬಲಿಗರಿದ್ದಾರೆ. ಚುನಾವಣೆಯಲ್ಲಿ ಗೆಲ್ಲಬೇಕಾದರೇ ದೊಡ್ಡ ಸಂಗತಿಯೇ ಇಲ್ಲ, ವ್ಯವಸ್ಥೆಗಳ ಅಗತ್ಯವೂ ಇಲ್ಲ. ನಾವೆಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು . ರಕ್ತವನ್ನು ಬೆವರು ಮಾಡಿ ಮಾತೃ ಪಕ್ಷವನ್ನು‌ ಅಧಿಕಾರಕ್ಕೆ ತರಲು ದುಡಿದಿದ್ದೇವೆ.ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಗೌರವ ತರುವ ವ್ಯವಸ್ಥೆಗಳು ಸುಸೂತ್ರವಾಗಿ‌ ನಡೆಯಬೇಕು ಮತ್ತು ಇದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ಕೆಲವು ತೀರ್ಮಾನಗಳನ್ನ‌ ತೆಗೊಂಡಿದ್ದಾರೆ. ಅವರ ನಿರ್ಧಾರಕ್ಕೆ ನಾನು ಕಟಿಬದ್ಧನಾಗಿದ್ದೇನೆ. ಕಾರ್ಯಕರ್ತರ ಭಾವನೆಗಳಿಗೆ ಸೂಕ್ತವಾದ ನಿರ್ಧಾರವನ್ನು ಮಾತೃ ಪಕ್ಷ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ನಿರ್ಧಾರ ಮೂರು ದಿನಗಳೊಳಗೆ ಕೈಗೊಳ್ಳಬೇಕು ಇಲ್ಲವಾದಲ್ಲಿ ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧವಾಗಿದೆ. ಇಲ್ಲವಾದಲ್ಲಿ ಪುತ್ತೂರಿನಲ್ಲಿ ನಡೆದ ವಿದ್ಯಾಮಾನಗಳು ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಬಿಜೆಪಿ ನಾಯಕರನ್ನು ಎಚ್ಚರಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply