LATEST NEWS
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಟೀಕೆ ಮಾಡಿದ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ಕಿಡಿ, ಸ್ಟುಡಿಯೋ ಧ್ವಂಸ

ಮುಂಬೈ ಮಾರ್ಚ್ 24: ಸ್ಟ್ಯಾಂಡ್ ಅಪ್ ಕಾಮಿಡಿ ಕಾರ್ಯಕ್ರಮದ ಸಂದರ್ಭ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆಯನ್ನು ದೇಶದ್ರೋಹಿ ಎಂದು ಕರೆದ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ಕಾರ್ಯಕರ್ತರು ಕಿಡಿಕಾರಿದ್ದು, ಕಾರ್ಯಕ್ರಮ ನಡೆಸಿದ್ದ ಹೊಟೇಲ್ ಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.
ಉಲ್ಲೇಖಿಸಿ ದಿಲ್ ತೋ ಪಾಗಲ್ ಹೈ ಹಾಡನ್ನು ಅಣಕಿಸುವ ರೀತಿಯಲ್ಲಿ ರಾಜಕೀಯ ಪಕ್ಷಗಳನ್ನು ವಿಲೀನಗೊಳಿಸಿ ಹಾಡಿದ್ದರು. ಆದರೆ, ಕಾಮ್ರಾ ಶಿಂಧೆ ಅವರ ಹೆಸರನ್ನು ಸ್ಪಷ್ಟವಾಗಿ ಎಲ್ಲೂ ಉಲ್ಲೇಖಿಸರಲಿಲ್ಲ.
ಏಕನಾಥ್ ಶಿಂಧೆ – ಉದ್ದವ್ ಠಾಕ್ರೆ ನಡುವಿನ ರಾಜಕೀಯ ಉಲ್ಲೇಖಿಸುತ್ತಾ ಮೊದಲು ಶಿವಸೇನಾ ಬಿಜೆಪಿಯಿಂದ ಹೊರಬಂದಿತು, ನಂತರ ಶಿವಸೇನಾ ಶಿವಸೇನಾದಿಂದಲೇ ಹೊರಬಂದಿತು. ಎನ್‌ಸಿಪಿಯಿಂದ ಎನ್‌ಸಿಪಿ ಹೊರಬಂದಿತು. ಇವರೆಲ್ಲಾ ಒಂದು ಮತದಾರನಿಗೆ 9 ಬಟನ್‌ಗಳನ್ನು ನೀಡಿದ್ದಾರೆ. ಥಾಣೆಯು ರಾಜಕೀಯ ಭದ್ರಕೋಟೆಯಾಗಿದ್ದು, ಗದ್ದಾರ್ (ದ್ರೋಹಿ) ಆಳ್ವಿಕೆ ಎಂದು ಪರೋಕ್ಷವಾಗಿ ಹಾಡು ಹೇಳುತ್ತಾ ಟೀಕಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಾಸ್ಯ ವಿರುದ್ಧ ಶಿಂಧೆ ಬಣದ ಶಿವಸೇನೆ ಸಂಸದ ನರೇಶ್ ಮ್ಹಾಸ್ಕೆ ಅವರು ಕಾಮ್ರಾ ವಿರುದ್ಧ ಕಿಡಿಕಾರಿದ್ದರು. , ಈತ ಉದ್ದವ್ ಠಾಕ್ರೆ ಅವರ ಶಿವಸೇನಾ (UBT)ಯಿಂದ ಹಣ ಪಡೆದು ಏಕನಾಥ್ ಶಿಂಧೆ ಅವರನ್ನು ಟೀಕಿಸಲು ನೇಮಕಗೊಂಡಿದ್ದಾರೆ ಎಂದು ಆರೋಪಿಸಿದ್ದರು. ಕುನಾಲ್ ಕಾಮ್ರಾ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗಿದ್ದ ಮುಂಬೈನ ಖಾರ್ ಪ್ರದೇಶದ ಹ್ಯಾಬಿಟಾಟ್ ಸ್ಟುಡಿಯೊ ಮತ್ತು ಯುನಿಕಾಂಟಿನೆಂಟಲ್ ಹೋಟೆಲ್ ಅನ್ನು ಶಿಂದೆ ನೇತೃತ್ವದ ಶಿವಸೇನಾ ಕಾರ್ಯಕರ್ತರು ಭಾನುವಾರ ರಾತ್ರಿ ಧ್ವಂಸಗೊಳಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸರು, ‘ಸ್ಟುಡಿಯೊ ಮತ್ತು ಹೋಟೆಲ್ ಅನ್ನು ಧ್ವಂಸಗೊಳಿಸಿ ಲೂಟಿ ಮಾಡಿದ ಆರೋಪ ಸಂಬಂಧ 40 ಮಂದಿ ಶಿವಸೇನಾ ಕಾರ್ಯಕರ್ತರು ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.