LATEST NEWS
ಕಾಮನ್‌ವೆಲ್ತ್ ಗೇಮ್ಸ್: ಭಾರತಕ್ಕೆ ಮತ್ತೊಂದು ಚಿನ್ನ ತಂದ ಜೆರೆಮಿ
ಬರ್ಮಿಂಗ್‌ಹ್ಯಾಮ್, ಜುಲೈ 31: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಳೆದ ಎರಡು ದಿನಗಳಿಂದ ಭಾರತ ಪದಕಗಳ ಭರ್ಜರಿ ಬೇಟೆಯಾಡುತ್ತಿದೆ. 21ರ ತರುಣ ಸಂಕೇತ್ ಮಹಾದೇವ್ ಸರ್ಗರ್ ಮೂಲಕ ಖಾತೆ ತೆರೆದ ಭಾರತ ಕಳೆದ ಎರಡು ದಿನಗಳಲ್ಲಿ 5 ಪದಕಗಳನ್ನು ಬಾಚಿಕೊಂಡಿದೆ.
ಭಾರತದ ಜೆರೆಮಿ ಲಾಲ್ರಿನ್ನುಂಗಾ ಪುರುಷರ 67 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 300 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
https://twitter.com/WeAreTeamIndia/status/1553690147589222401?ref_src=twsrc%5Etfw%7Ctwcamp%5Etweetembed%7Ctwterm%5E1553690147589222401%7Ctwgr%5E0f19e9a0f57c9a7a0e2915574858269db86b8dba%7Ctwcon%5Es1_&ref_url=https%3A%2F%2Fpublictv.in%2Fcwg-2022-weightlifter-jeremy-lalrinnunga-wins-gold-in-mens-67kg-final%2F
ಜೆರೆಮಿ ಸ್ನ್ಯಾಚ್ ಈವೆಂಟ್‌ನಲ್ಲಿ 140 ಕೆಜಿ ಹಾಗೂ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಒಟ್ಟು 160 ಕೆಜಿ (ಒಟ್ಟು 300 ಕೆ.ಜಿ) ಎತ್ತುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದು, ದಾಖಲೆ ನಿರ್ಮಿಸಿದ್ದಾರೆ. ಇದು ಭಾರತಕ್ಕೆ ಒಲಿದ 2ನೇ ಚಿನ್ನದ ಪದಕವಾಗಿದೆ.
ನಿನ್ನೆ ಮೀರಾಬಾಯಿ ಚಾನು ಅವರು ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.