Connect with us

LATEST NEWS

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮಂಗಳೂರು ನವೆಂಬರ್ 12: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.

ಮಂಗಳೂರಿನ ಫಳ್ನೀರ್ ವಾಡ್೯ ನ ಜೆಪ್ಪು ನಲ್ಲಿ ಈ ಘಟನೆ ನಡೆದಿದ್ದು, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಜೆಪ್ಪುವಿನ ಮತಗಟ್ಟೆಯ ಹೊರಗಡೆ ನಿಂತು ಮತದಾರರಿಗೆ ಕಾಂಗ್ರೇಸ್ ಪಕ್ಷಕ್ಕೆ ಮತಹಾಕುವಂತೆ ಮನವಿ ಮಾಡುತ್ತಿದ್ದರು. ಇದಕ್ಕೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು, ಚುನಾಯಿತ ಪ್ರತಿನಿಧಿಗಳು ಮತಗಟ್ಟೆ ಬಳಿ ಹಾಜರಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಐವನ್ ಡಿಸೋಜಾ ಸ್ಥಳ ಬಿಟ್ಟು ತೆರಳದಿದ್ದರೆ ಮತದಾರರನ್ನು ಸೆಳೆಯಲು ನಾವು ಶಾಸಕರು ಹಾಗೂ ಸಂಸದರನ್ನು ಸ್ಥಳಕ್ಕೆ ಕರೆಯುತ್ತೆವೆ ಎಂದ ಬಿಜೆಪಿ ಕಾರ್ಯಕರ್ತರು ಎಚ್ಚರಿಸಿದರು.

ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡೂ ಪಕ್ಷಗಳ ಮುಖಂಡರಿಗೆ ಖಡಕ್ ಸೂಚನೆ ನೀಡಿ, ಮತದಾರರಿಗೆ ಮುಕ್ತವಾಗಿ ಮತಚಲಾಯಿಸುವಂತೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *