Connect with us

LATEST NEWS

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಮಗ ಕೊರೊನಾಗೆ ಬಲಿ

ನವದೆಹಲಿ ಎಪ್ರಿಲ್ 22: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಮಗ ಕೊರೊನಾದಿಂದ ಸಾವನಪ್ಪಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಕೊರೊನಾದಿಂದ ನಾನು ನನ್ನ ಮಗನನ್ನು ಕಳೆದುಕೊಂಡೆ ಎಂದು ತಿಳಿಸಿದ್ದಾರೆ.


ಜೂನ್ 9 ರಂದು 35 ನೇ ವರ್ಷಕ್ಕೆ ಕಾಲಿಡುತ್ತಿದ್ದ ಆಶಿಶ್, ಗುರ್‌ ಗಾಂವ್‌ನ ಮೆಡಂತಾ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ವಿರುದ್ಧದ ಎರಡು ವಾರಗಳ ಹೋರಾಟದ ಬಳಿಕ ಬೆಳಿಗ್ಗೆ 5.30 ಕ್ಕೆ ಅವರು ಹಠಾತ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಪಿಟಿಐಗೆ ತಿಳಿಸಿವೆ.


ನನ್ನ ಹಿರಿಯ ಮಗ ಆಶಿಶ್ ಯೆಚೂರಿಯನ್ನು ಕೋವಿಡ್‌ನಿಂದ ಇಂದು ಬೆಳಿಗ್ಗೆ ಕಳೆದುಕೊಂಡೆ ಎಂದು ನಾನು ತಿಳಿಸಬೇಕಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ನಮಗೆ ಭರವಸೆ ಮತ್ತು ಅವನಿಗೆ ಉತ್ತಮ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಮುಂಚೂಣಿ ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ನಮ್ಮೊಂದಿಗೆ ನಿಂತ ಅಸಂಖ್ಯಾತ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಯೆಚೂರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.