Connect with us

    LATEST NEWS

    ಪ್ರಚೋದನಕಾರಿ ಭಾಷಣ ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲು

    ಮಂಗಳೂರು ಅಕ್ಟೋಬರ್ 6: ಲವ್ ಜಿಹಾದ್ ಹಾಗೂ ಮತಾಂತರ ವಿರುದ್ದ ಸುರತ್ಕಲ್ ನಲ್ಲಿ ಇತ್ತೀಚೆಗೆ ನಡೆದ ಜನಜಾಗೃತಿ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರಾ ಕುಂದಾಪುರ ಅವರ ಮೇಲೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.


    ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರ ಕುಂದಾಪುರ ಅವರು ಅತ್ಯಂತ ಕೆಟ್ಟ, ಸಾಮಾಜಿಕ ಸ್ವಾಸ್ಥ್ಯ ಕದಡುವ ದ್ವೇಷಪೂರಿತ ಮತ್ತು ಕರಾವಳಿಯ ಕೋಮುಭಾವನೆಗಳನ್ನು ಕೆರಳಿಸುವ ಭಾಷಣ ಮಾಡಿದ್ದು ಆಕೆ ಮತ್ತು ಸಂಘಟಕರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಬೊಂಡಾಲ ಚಿತ್ತರಂಜನ್ ಶೆಟ್ಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


    ಚೈತ್ರಾ ಕುಂದಾರುರ ಭಾಷಣದಲ್ಲಿ ತುಳುನಾಡಿನ ಕಾರಣಿಕ ಪುರುಷರು, ಆರಾಧ್ಯ ದೈವಗಳಾದ ಕೋಟ ಚೆನ್ನಯರನ್ನು ದುರುಪಯೋಗಪಡಿಸಿ, ತುಳುವರ ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡಿದ್ದಾಳೆ. ಈ ಹಿನ್ನಲೆ ಈ ವಿಷಯದ ಸಾಮಾಜಿಕ, ರಾಜಕೀಯ ಗಂಭೀರತೆಯನ್ನು ಮನಗಂಡು ತಾವು ಭಾಷಣಕಾರ್ತಿ ಚೈತ್ರ ಹಾಗೂ ಕಾರ್ಯಕ್ರಮ ಸಂಯೋಜಕರನ್ನು ಬಂಧಿಸಿ ಸರಿಯಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ವಿನಂತಿಸುತ್ತಿದ್ದೇನೆ ಎಂದು ದೂರುದಾರರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *