DAKSHINA KANNADA
ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು

ಪುತ್ತೂರು, ಮೇ 24: ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.
ಸಿದ್ಧರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್ ದೂರು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈ ರೀತಿಯ ಆರೋಪ ಮಾಡಿದ್ದು ಸರಿಯಲ್ಲ, ಹರೀಶ್ ಪೂಂಜಾ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
