LATEST NEWS
ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ದೂರು
ಮಂಗಳೂರು ನವೆಂಬರ್ 6: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇಶ ದ್ರೋಹ ಪ್ರಕರಣ ದಾಖಲಿಸುವಂತೆ ಎಸ್ ಡಿಪಿಐ ದೂರು ನೀಡಿದೆ. ಒಂದು ವೇಳೆ ಕೇಸು ದಾಖಲಿಸಲಿದ್ದರೆ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ಕೂಡ ನೀಡಿದೆ.
ಎಸ್ ಡಿಪಿಐ ಕಿನ್ಯ ಗ್ರಾಮ ಸಮಿತಿ ಸದಸ್ಯ ನೌಫಲ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಕೋಮು ಪ್ರಚೋದನೆ ಮತ್ತು ದೇಶ ದ್ರೋಹ ಪ್ರಕರಣ ದಾಖಲಿಸಲು ದೂರು ನೀಡಿದ್ದಾರೆ.
ದೂರಿನಲ್ಲಿ ನವೆಂಬರ್ 1 ರಂದು ಕಿನ್ಯಾದ ಕೇಶಲ ಶಿಶು ಮಂದಿರ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕಲ್ಲಡ್ಕ್ ಪ್ರಭಾಕರ್ ಭಟ್ ಉಳ್ಳಾಲ ಪಾಕಿಸ್ತಾನದ ಭಾಗವಾಗಿದೆ. ಈ ಹಿನ್ನಲೆ ಈ ಪ್ರದೇಶದಲ್ಲಿ ದೈವಸ್ಥಾನ ಮತ್ತು ಸಂಸ್ಕೃತಿಯನ್ನು ಉಳಿಸುವವರು ಯಾರು ಎಂದು ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸದಿದ್ದರೆ ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಸಬೇಕಾದಿತು ಎಂದು ಎಸ್ ಡಿಪಿಐ ಎಚ್ಚರಿಸಿದೆ.
Facebook Comments
You may like
-
ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ..ಆರೋಪಿ ಪತ್ತೆಗೆ ವಿಶೇಷ ತಂಡ
-
ಯೂಟ್ಯೂಬ್ ವಿಡಿಯೋಗಾಗಿ ಬಾಲಕರ ಕಿಡ್ನಾಪ್….!!
-
ವಿದ್ಯಾರ್ಥಿನಿಯರ ಮೈಮುಟ್ಟಿ ಚುಡಾಯಿಸುತ್ತಿದ್ದ ಅಪ್ರಾಪ್ತನಿಗೆ ಬಿತ್ತು ಧರ್ಮದೇಟು..!!
-
ಪುತ್ತೂರಿನಲ್ಲಿ ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿ ಪತ್ತೆ
-
ಅಣ್ಣಾಮಲೈಯವರ ಅನುಭವದ ಬುತ್ತಿ ‘ಸ್ಟೆಪ್ಪಿಂಗ್ ಬಿಯಾಂಡ್ ಖಾಕಿ’ 18ರಂದು ಬಿಡುಗಡೆ
-
ಗೆಳತಿಯ ಹುಟ್ಟು ಹಬ್ಬಕ್ಕೆ ವಿಶ್ ಮಾಡಲು ಹೋಗಿ ಪೋಲಿಸ್ ಅತಿಥಿಯಾದ!
You must be logged in to post a comment Login