BELTHANGADI
ಮತ ಎಣಿಕೆ ಕೇಂದ್ರದ ಬಳಿ ಪಾಕಿಸ್ತಾನ ಪರ ಘೋಷಣೆ ಎಸ್ ಡಿಪಿಐ ಸಂಘಟನೆಯ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ ಡಿಸೆಂಬರ್ 30: ಗೆಲುವಿನ ಸಂಭ್ರಮಾಚರಣೆಯ ಸಂದರ್ಭ ವೈರಿ ದೇಶ ಪಾಕಿಸ್ತಾಮದ ಪರ ಘೋಷಣೆ ಕೂಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಮತ ಎಣಿಕೆ ಕೇಂದ್ರದಲ್ಲಿ ನಡೆಸಿದೆ.
ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಪಂಚಾಯತ್ ಗಳಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಉಜಿರೆಯ ಎಸ್.ಡಿ.ಎಂ ಕಾಲೇಜು ಮತ ಎಣಿಕೆ ಕೇಂದ್ರದ ಬಳಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರ ಗುಂಪಿನಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿ ಬಂದಿದೆ. ಇದೇ ಸಂದರ್ಭದಲ್ಲಿ ಇನ್ನೊಂದು ಕಡೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರೂ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು.

ಪಾಕಿಸ್ತಾನ ಪರ ಘೋಷಣೆ ಕೂಗಿ ಬಂದ ಹಿನ್ನಲೆಯಲ್ಲಿ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಈ ಕೃತ್ಯಕ್ಕೆ ವಿರೋಧವನ್ನೂ ವ್ಯಕ್ತಪಡಿಸಿದ್ದರು. ಘೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೋಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್.ಡಿ.ಪಿ.ಐ ಸಂಘಟನೆಯ ಸುಮಾರು 10-15 ಜನ ಬೆಂಬಲಿಗರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಅ.ಕ್ರ 99/20 ಕಲಂ 143,124A r/w 149 ಪ್ರಕರಣ ದಾಖಲಾಗಿದೆ.