DAKSHINA KANNADA
ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಿರುಗಾಡಿದ ವೈದ್ಯರ ಮೇಲೆ ಪ್ರಕರಣ ದಾಖಲು

ಸುಳ್ಯ ಜುಲೈ 19: ಕ್ವಾರೆಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ತಿರುಗಾಡಿದ ಸುಳ್ಯ ಕೆವಿಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರು ಮೇಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಪ್ರಕರಣ ದಾಖಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯರಾದ ವಾನನ್ಸ್, ಪ್ರೇಮ್ ಕುಮಾರ್, ದೇವರಾಮನ್, ಪ್ರಬೀನ್, ಶೃತಿ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.
ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು ಕಾಣಿಸಿಕೊಂಡ ಹಿನ್ನಲೆ ಈ ಐವರು ವೈದ್ಯರನ್ನು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿರಲು ಜಿಲ್ಲಾಡಳಿತ ಸೂಚಿಸಿತ್ತು. ಆದರೆ ಈ ಐದು ಜನ ವೈದ್ಯರು ಜುಲೈ 15ರಂದು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ತಿರುಗಾಡಿದ್ದಾರೆ. ವೈದ್ಯರ ಜಿಪಿಎಸ್ ಮಾಹಿತಿ ಆಧರಿಸಿ ಅವರು ಕ್ವಾರಂಟೈನ್ ನಿಯಮ ಉಲ್ಲಂಘಿಸಿರುವು ಸಾಭಿತಾಗಿದ್ದು, ಈ ಹಿನ್ನಲೆ ಜಿಲ್ಲಾಡಳಿತ ವೈದ್ಯರ ಮೇಲೆ ಪ್ರಕರಣ ದಾಖಲಿಸಲು ಸೂಚಿಸಿದ್ದು, ಸುಳ್ಯ ಠಾಣೆಯಲ್ಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.
