ಬೆಂಗಳೂರು ನವೆಂಬರ್ 21: ಕಲರ್ಸ್ ಕನ್ನಡದಲ್ಲಿ ಬರುತ್ತಿರುವ ಬಿಗ್ ಬಾಸ್ ಶೋ ಸೀಸನ್ 12 ವಿವಾದಕ್ಕೆ ಕಾರಣವಾಗಿದೆ. ಪ್ರಾರಂಭದಿಂದಲೂ ಒಂದಲ್ಲಾ ಒಂದು ವಿವಾದಕ್ಕೆ ಕಾರಣವಾಗಿರುವ ಶೋ ಇದೀಗ ನಿರೂಪಕ ಸುದೀಪ್ ಮೇಲೆ ದೂರು ದಾಖಲಾಗುವ ಮಟ್ಟಕ್ಕೆ ಹೋಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12’ರಿಯಾಲಿಟಿ ಶೋನಲ್ಲಿ ಇರುವ ಸ್ಪರ್ಧಿಗಳ ನಡೆ-ನುಡಿ ಗಮನಿಸಿ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುವವರು ಹೆಚ್ಚಾಗಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಯಲ್ಲಿ ದೂರುಗಳು ಕೂಡ ದಾಖಲಾಗುತ್ತಿವೆ. ಬಿಗ್ ಬಾಸ್ ಶೋ ನಿರೂಪಕ ಕಿಚ್ಚ ಸುದೀಪ್ ವಿರುದ್ಧವೂ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ! ಹೌದು, ರಕ್ಷಿತಾ ಶೆಟ್ಟಿ ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಿಸಲಾಗಿದೆ.

ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಅವರು ದೂರು ನೀಡಿದ್ದಾರೆ. ಡಿವೈಎಸ್ಪಿಗೆ ದೂರು ಸಲ್ಲಿಕೆ ಮಾಡಲಾಗಿದೆ. ‘ಸ್ಪರ್ಧಿ ರಕ್ಷಿತಾಗೆ ಸುದೀಪ್ ನಿಂದಿಸಿದ್ದಾರೆ. ಸುದೀಪ್ ಜೊತೆಗೆ ಅಶ್ವಿನಿ ಗೌಡ ವಿರುದ್ಧವೂ ದೂರು ನೀಡಿದ್ದೇನೆ. ಸುದೀಪ್ ಅವರು ಪಿತ್ತ ನೆತ್ತಿಗೇರಲಿದೆ ಎಂಬ ಪದ ಬಳಕೆ ಮಾಡಿದ್ದು ಎಷ್ಟು ಸರಿ? ಇಂತಹ ಪದವನ್ನು ಬಳಕೆ ಮಾಡಿದ್ದು ಸರಿನಾ? ಜೊತೆಗೆ ಅಶ್ವಿನಿ ಗೌಡ ಎಸ್ ಹಾಗೂ ಸ್ಲಂ ಎಂದು ಬಳಸುತ್ತಾರೆ. ಹಾಗಾಗಿ ನಾನು ಈ ಬಗ್ಗೆ ದೂರು ಕೊಟ್ಟಿದ್ದೇನೆ’ ಎಂದು ಸಂಧ್ಯಾ ಹೇಳಿದ್ದಾರೆ. ರಿಷಾ ವಿರುದ್ಧವೂ ದೂರು ನೀಡಲಾಗಿದೆ



