LATEST NEWS
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ನಕಲಿ ಆದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ನಕಲಿ ಆದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮಂಗಳೂರು ಜನವರಿ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿದ ಜಿಲ್ಲಾಧಿಕಾರಿ ಕಚೇರಿಯ ಹೆಸರಿನಲ್ಲಿ ನಕಲಿ ಆದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದ್ದು, ಈ ಪ್ರಕರಣ ಕುರಿತಂತೆ ದುಷ್ಕರ್ಮಿಗಳ ವಿರುದ್ದ ನಗರದ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶವನ್ನು ತಿದ್ದುಪಡಿ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಐಪಿಸಿ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮಕ್ಕೆ ದೂರಿನಲ್ಲಿ ಆಗ್ರಹಿಸಲಾಗಿದೆ.