LATEST NEWS
ಯು.ಟಿ ಖಾದರ್ ಪ್ರಚೋದನಕಾರಿ ಹೇಳಿಕೆ ವಿರುದ್ದ ಉಳ್ಳಾಲ ಠಾಣೆಯಲ್ಲಿ ದೂರು ದಾಖಲು
ಯು.ಟಿ ಖಾದರ್ ಪ್ರಚೋದನಕಾರಿ ಹೇಳಿಕೆ ವಿರುದ್ದ ಉಳ್ಳಾಲ ಠಾಣೆಯಲ್ಲಿ ದೂರು ದಾಖಲು
ಮಂಗಳೂರು ಡಿಸೆಂಬರ್ 19: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ಸಂದರ್ಭ ಕರ್ನಾಟಕ ರಾಜ್ಯ ಹೊತ್ತಿ ಉರಿಯಲಿದೆ ಎಂಬ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಶಾಸಕ ಯು.ಟಿ ಖಾದರ್ ಮೇಲೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ನಡೆದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನಾ ವೇಳೆ ಮಾತನಾಡಿದ ಮಾಜಿ ಸಚಿವ ಖಾದರ್ ರಾಜ್ಯಕ್ಕೆ ಬೆಂಕಿ ಹಚ್ಚೋದಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ರೀತಿಯಾಗಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಮೋಹನ್ ರಾಜ್ ಯು.ಟಿ ಖಾದರ್ ವಿರುದ್ದ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.