Connect with us

    BANTWAL

    ಹೊಸ್ಮಾರ್ – ಭಾರೀ ಮಳೆಗೆ ಕಾಂಪೌಂಡ್ ಕುಸಿದು ಎರಡು ಮನೆಗಳಿಗೆ ಅಪಾಯ

    ಬಂಟ್ವಾಳ ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಳೆ ಸಂಬಧಿಸಿದಂತೆ ಹಲವು ಕಡೆಗಳಲ್ಲಿ ಅನಾಹುತಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ಈ ನಡುವೆ ಭಾರೀ ಮಳೆಗೆ ಕಾಂಪೌಂಡ್ ಕುಸಿದು ಎರಡು ಮನೆಗಳು ಅಪಾಯದ ಸ್ಥಿತಿಗೆ ತಲುಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಹೊಸ್ಮಾರ್ ಎಂಬಲ್ಲಿ ನಡೆದಿದೆ.


    ಅಶೋಕ್ ಪೂಜಾರಿ ಮತ್ತು ಗಣೇಶ್ ಪೂಜಾರಿ ಎಂಬುವವರ ಮನೆ ಅಪಾಯದಲ್ಲಿದ್ದು, ಸದ್ಯ ಮನೆ ಮಂದಿಯನ್ನು ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ. ಮಣ್ಣು ಮತ್ತೆ ಕುಸಿಯದಂತೆ ತುರ್ತು ತಡೆಗೋಡೆ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ಕಾಂಪೌಂಡ್ ಕುಸಿದು ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *