LATEST NEWS
ಮಂಗಳೂರು – ತಡೆಗೊಡೆ ಕುಸಿದು 13ಕ್ಕೂ ಹೆಚ್ಚು ವಾಹನಗಳಿಗೆ ಹಾನಿ
ಮಂಗಳೂರು ಜುಲೈ 17: ಮಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂದರಿನ ನಲಪಾಡ್ ಕುನಿಲ್ ಟಾವರ್ಸ್ಗೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ನ ತಡೆಗೋಡೆ ಕುಸಿದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ.ಸುಮಾರು ಒಂದೂವರೆ ಅಡಿ ಅಗಲ, 25 ಅಡಿ ಎತ್ತರ ಹಾಗೂ 100 ಅಡಿಗೂ ಹೆಚ್ಚು ಉದ್ದದ ತಡೆಗೋಡೆ ಕುಸಿದು ಬಿದ್ದಿದೆ.
ಈ ಘಟನೆಯಲ್ಲಿ 13ಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿ ಹೂತು ಹೋಗಿದ್ದು, ಕಟ್ಟಡದ ಆವರಣದಲ್ಲಿದ್ದ ನೀರಿನ ಬಾವಿಯಲ್ಲಿ ಅರ್ಧದಷ್ಟು ಮಣ್ಣು, ಕಲ್ಲು ತುಂಬಿದೆ. ಬಾವಿಯ ನೀರು ಕುಡಿಯಲು ಯೋಗ್ಯವಲ್ಲದಂತಾಗಿದೆ.
ಇನ್ನು ಅಪಾರ್ಟ್ಮೆಂಟ್ನಲ್ಲಿ ನೂರಕ್ಕೂ ಹೆಚ್ಚು ಮನೆಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುತ್ತಿದ್ದರು. ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿಲ್ಲ. ಈ ಸಮಯದಲ್ಲಿ ತಡೆಗೋಡೆ ಕುಸಿದಿದ್ದು, ಭಾರಿ ದುರಂತ ತಪ್ಪಿದೆ.