Connect with us

    DAKSHINA KANNADA

    ಕಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು…..!!

    ಪುತ್ತೂರು ಜುಲೈ 7: ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.


    ಮೃತ ಮಹಿಳೆಯನ್ನು ಶೋಭಾ (49) ಎಂದು ಗುರುತಿಸಲಾಗಿದೆ. ಇವರು ಮನೆ ಹಿಂಭಾಗದಲ್ಲಿ ಬೀಡಿ ಕಟ್ಟುತ್ತಿದ್ದ ವೇಳೆ ಕಂಪೌಂಡ್ ಗೋಡೆ ಕುಸಿತಗೊಂಡಿದೆ.

    ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಂಪೌಂಡ್ ಗೋಡೆ ಕುಸಿದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಸ್ಥಳೀಯರಿಂದ ತೆರವು ಕಾರ್ಯಾಚರಣೆ ನಡೆಯುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply