Connect with us

BELTHANGADI

ಸೌಜನ್ಯ ಹೋರಾಟಕ್ಕೆ ಎಂಟ್ರಿ ಕೊಟ್ಟ ಒಡನಾಡಿ ಸೇವಾ ಸಂಸ್ಥೆ ..!

Share Information

ಧರ್ಮಸ್ಥಳ, ಜುಲೈ 04: ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಹೋರಾಟಕ್ಕಿಳಿದಿದ್ದ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಹೋರಾಟಕ್ಕೆ  ಎಂಟ್ರಿ ಕೊಟ್ಟಿದೆ.

ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ “ಒಡನಾಡಿ” ಬೆಂಬಲ ನೀಡಿದ್ದು, ರಾಜ್ಯದ್ಯಂತ ಸೌಜನ್ಯ ಪರವಾಗಿ ಹೋರಾಟ ನಡೆಸಲು ಒಡನಾಡಿ ಸಂಸ್ಥೆ ಸಿದ್ದವಾಗಿದೆ. ನಿನ್ನೆ ಸೌಜನ್ಯ ಪರ ಹೋರಾಟಗಾರರನ್ನ ಭೇಟಿಯಾದ ಒಡನಾಡಿಯ ಮುಖಂಡರಾದ ಒಡನಾಡಿಯ ಸ್ಥಾಪಕ ಕಾರ್ಯದರ್ಶಿ ಸ್ಟಾಲಿನ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ, ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟ ಕಟೆಗೆ ತರಲಾಗಿಲ್ಲ, ದೇಶದ ಕಾನೂನಿಗೆ ಇದು ಸಾಧ್ಯವಾಗಿಲ್ಲ ಎಂಬುವುದು ನಗೆ ಪಾಟಿಲಿನ ಸಂಗತಿ, ಸಿಬಿಐ ಘನತೆಯನ್ನ ಉಳ್ಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಮರುತನಿಖೆಯಾಗಬೇಕು. ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ ..!

ಯಾರು ..ಸೌಜನ್ಯಳನ್ನ ಅತ್ಯಾಚಾರ ಮಾಡಿದ್ರು ಎಂಬುವುದೇ ನಮ್ಮ ಹುಡುಕಾಟ, ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಇದರ ಬಗ್ಗೆ ಹೆಚ್ಚು ಮಾತನಾಡಬೇಕು. ಸಾಮಾಜಿಕ ಜಾವಬ್ದಾರಿ ಅನುಶಾಸನ ಬದ್ಧವಾದ ಹೊಣೆಗಾರಿಕೆ ಹೊತ್ತವರು. ತಮ್ಮ ಮನೆ ಬಾಗಿಲಲ್ಲಿರುವಂತಹ ತಮ್ಮ ಮನೆಯ ಮಗುವಿನ ಮೇಲಾಗಿರುವ ಅತ್ಯಾಚಾರ. ಆ ಮಗುವಿಗೆ ಸಂಬಂಧ ಪಟ್ಟವರಿಗೆ ಸಾಂತ್ವನ ಹೇಳುವುದು ಅವರ ಕರ್ತವ್ಯವಾಗಿದೆ.

ಆ ಮಗುವಿಗೋಸ್ಕರ ನಾನು ಇದ್ದೇನೆ ಎನ್ನೋದು ಹೆಗ್ಗಡೆ ಅವರ ಬಾಯಿಂದ ಬರಲಿ. ಆ ಮಾತು ಅವರ ಬಾಯಿಯಿಂದ ಬಂದರೆ ನಾವು ಅವರಿಗೆ ಋಣಿಗಳಾಗುತ್ತೀವಿ. ಸೌಜನ್ಯ ಹೋರಾಟ ಧರ್ಮದ ಕಾರ್ಯ, ಈ ಮಗುವಿಗೆ ನ್ಯಾಯವನ್ನ ದೊರಕಿಸುವ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಕೆಲಸ ಮಾಡುತ್ತೇವೆ. ಸಂತೋಷ್ ರಾವ್ ಆರೋಪಿಯಲ್ಲ ಎಂದು ಸಾಬೀತಾದ ಹಿನ್ನಲೆ, ಮತ್ತೆ ತೀವ್ರ ಸ್ವರೂಪ ಪಡೆದುಕೊಂಡ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಮತ್ತೆ ರಾಜ್ಯಾದ್ಯಂತ ಸಂಚಲನ ಸೃಷ್ಠಿಸುತ್ತಿದೆ.


Share Information
Advertisement
Click to comment

You must be logged in to post a comment Login

Leave a Reply