Connect with us

    KARNATAKA

    ಹುಬ್ಬಳ್ಳಿ ಗಲಭೆ ಪ್ರಕರಣ,ಕರಸೇವಕ ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ಧ ಜಾಮೀನು..!

    ಹುಬ್ಬಳ್ಳಿ: ನಾಡಿನಲ್ಲಿ ಕೋಲಾಹಲ ಸೃಷ್ಟಿಸಿದ್ದ  ಹುಬ್ಬಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕರಸೇವಕ ಶ್ರೀಕಾಂತ್​ ಪೂಜಾರಿಗೆ ಜಾಮೀನು ಮಂಜೂರು ಆಗಿದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.


    ರಾಮಜನ್ಮಭೂಮಿ ಹೋರಾಟಕ್ಕೆ ಸಂಬಂಧಿಸಿದಂತೆ 1992ರಲ್ಲಿ ದೇಶಾದ್ಯಂತ ನಡೆದಿದ್ದ ಹೋರಾಟದ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆಗೆ ಸಂಬಂಧಿಸಿದಂತೆ ಶ್ರೀಕಾಂತ್​ ಪೂಜಾರಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿತ್ತು.
    ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿಯಾಗಿರುವ ಶ್ರೀಕಾಂತ್ ಪೂಜಾರಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈತನ ಬಂಧನದ ಬಳಿಕ ರಾಮಮಂದಿರದ ಉದ್ಘಾಟನೆಯ ಸಂದರ್ಭ ಕರಸೇವಕನನ್ನು ರಾಜ್ಯ ಸರ್ಕಾರ ಬಂಧಿಸಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಬೆಳವಣಿಗೆ ರಾಜ್ಯದಲ್ಲಿ ರಾಜಕೀಯ ಕೆಸೆರೆರಚಾಟಕ್ಕೂ ಕಾರಣವಾಗಿತ್ತು.
    ಈ ನಡುವೆ ಬಂಧಿತ ಶ್ರೀಕಾಂತ್ ಪೂಜಾರಿ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಹುಬ್ಬಳ್ಳಿ ನಗರ ಠಾಣೆಯ ಪೊಲೀಸರು ಈತನನ್ನು ಬಂಧಿಸಿದ್ದರು.

     

    Share Information
    Advertisement
    Click to comment

    Leave a Reply

    Your email address will not be published. Required fields are marked *