Connect with us

LATEST NEWS

ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಉಡುಪಿ ಡಿಸೆಂಬರ್ 13: ದೇಶ ಕಂಡ ಅಪರೂಪದ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.


ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಸಾಹಿತ್ಯಕ್ಕೆ ನೀಡಿರುವ ಅಪಾರ ಕೊಡುಗೆಗಳಿಂದಾಗಿ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ಸದಾ ನೆನಪಿನಲ್ಲಿ ಉಳಿಯುತ್ತಾರೆ. ಸಂಸ್ಕೃತ ಮತ್ತು ಕನ್ನಡ ಭಾಷೆಗಳ ಬಗೆಗೆ ಅವರು ತೋರಿರುವ ಉತ್ಸಾಹ ಶ್ಲಾಘನೀಯ…’ ಎಂದಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಹಿತ್ಯಕ್ಕೆ ನೀಡಿರುವ ಅಪಾರ ಕೊಡುಗೆಗಳಿಂದಾಗಿ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ಸದಾ ನೆನಪಿನಲ್ಲಿ ಉಳಿಯುತ್ತಾರೆ. ಸಂಸ್ಕೃತ ಮತ್ತು ಕನ್ನಡ ಭಾಷೆಗಳ ಬಗೆಗೆ ಅವರು ತೋರಿರುವ ಉತ್ಸಾಹ ಶ್ಲಾಘನೀಯ…’ ಎಂದಿದ್ದಾರೆ.

ಇನ್ನು ಬನ್ನಂಜೆ ಗೋವೀಂದಾಚಾರ್ಯರ ನಿಧನದ ಸುದ್ದಿ ತಿಳಿಯತ್ತಿದ್ದಂತೆ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ರಘುಪತಿ ಭಟ್‌ ಅವರು ಅಂತಿಮ ದರ್ಶನ ಪಡೆದರು.

Facebook Comments

comments