LATEST NEWS
ಚಿಲಿಂಬಿ ಸಾಯಿಮಂದಿರದ ಬಳಿ ಚುನಾವಣಾ ಪ್ರಚಾರ – ಬಿಜೆಪಿ – ಕಾಂಗ್ರೇಸ್ ಕಾರ್ಯಕರ್ತರ ನಡುವೆ ವಾಗ್ವಾದ – ಹೊಡೆದಾಟಕ್ಕೆ ಮುಂದಾದ ಕಾರ್ಯಕರ್ತರು

ಮಂಗಳೂರು ಎಪ್ರಿಲ್ 18: ಉರ್ವ ಚಿಲಿಂಬಿ ಸಾಯಿ ಮಂದಿರದ ಬಳಿ ಚುನಾವಣಾ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದ್ದು, ಕಾರ್ಯಕರ್ತರು ಹೊಡೆದಾಟಕ್ಕೆ ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ.
ಮಂಗಳೂರಿನ ಉರ್ವ ಚಿಲಿಂಬಿ ಸಮೀಪ ಇರುವ ಸಾಯಿಮಂದಿರದ ಎದುರು ರಾಮಮಂದಿರ ಹಿನ್ನಲೆ ಬಿಜೆಪಿ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಕಾಂಗ್ರೇಸ್ ಕಾರ್ಯಕರ್ತರು ಪ್ರಚಾರ ನಡೆಸದಂತೆ ಆಕ್ಷೇಪ ಎತ್ತಿದ್ದಾರೆ.

ಈ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟದ ಹಂತಕ್ಕೆ ತಲುಪಿತ್ತು, ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಕಾಂಗ್ರೇಸ್ ಮುಖಂಡ ಮಿಥುನ್ ರೈ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಗುಂಪುಗಳನ್ನು ಸ್ಥಳದಿಂದ ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.