Connect with us

LATEST NEWS

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ಮಾಜಿ ಸಚಿವ ಶಾಸಕ ಯು.ಟಿ ಖಾದರ್ ನೇಮಕ

ಬೆಂಗಳೂರು ಜನವರಿ 30: ಕರಾವಳಿಯಲ್ಲಿರುವ ಕಾಂಗ್ರೇಸ್ ನ ಏಕೈಕ ಶಾಸಕ ಯು.ಟಿ ಖಾದರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕ ಮಾಡಲಾಗಿದೆ.


ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.


ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಇನ್ನೂ ಒಂದು ವರ್ಷದ ಎರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ.

Advertisement
Click to comment

You must be logged in to post a comment Login

Leave a Reply